ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಅಯ್ಯನಕೆರೆ ಹಾಡಿಯಲ್ಲಿ ಜಿಂಕೆ ಬೇಟೆಯಾಡಿ ಮನೆಯಲ್ಲಿ ಮಾಂಸ ಬೇರ್ಪಡಿಸಿ ಸಾಗಣೆಗೆ ಹೊಂಚು ಹಾಕುತ್ತಿದ್ದ ಆರೋಪಿಯನ್ನು ವಲಯ ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ.
ಹನಗೋಡು ಹೋಬಳಿ ಅಯ್ಯನಕೆರೆ ಹಾಡಿಯ ನಾಗ (37) ಮನೆಯ ಪಕ್ಕದಲ್ಲಿ ಜಿಂಕೆ ಚರ್ಮ ಸುಲಿದು ಮಾಂಸ ಪ್ರತ್ಯೇಕಿಸಿ ಸಾಗಣೆಗೆ ಸಿದ್ಧತೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಡಿ.ಆರ್.ಎಫ್.ಒ. ಶಿವಕುಮಾರ್ ಮತ್ತು ತಂಡದವರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು. ಈತನೊಂದಿಗೆ ಇದ್ದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಎಸಿಎಫ್ ಲಕ್ಷ್ಮೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ತಲೆಮರೆಸಿಕೊಂಡ ಇಬ್ಬರಿಗೆ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.