ADVERTISEMENT

ಹುಣಸೂರು: ಮರೂರು ರಸ್ತೆ ದುರಸ್ತಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 14:19 IST
Last Updated 11 ಏಪ್ರಿಲ್ 2025, 14:19 IST
ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿ ಮರೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್ ಗೌಡ ಗುರುವಾರ ಚಾಲನೆ ನೀಡಿದರು
ಹುಣಸೂರು ತಾಲ್ಲೂಕಿನ ಗಾವಡಗೆರೆ ಹೋಬಳಿ ಮರೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್ ಗೌಡ ಗುರುವಾರ ಚಾಲನೆ ನೀಡಿದರು   

ಹುಣಸೂರು: ಕ್ಷೇತ್ರದ ನಾಲೆಗಳ ದುರಸ್ತಿ ಮತ್ತು ಲೈನಿಂಗ್ ಕಾಮಗಾರಿ ಕೈಗೊಳ್ಳುವ ಕುರಿತು ಈಗಾಗಲೇ ಜಲಸಂಪನ್ಮೂಲ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದು ಅತಿ ಶೀಘ್ರದಲ್ಲೇ ಟೆಂಡರ್ ಕರೆಯುವ ಭರವಸೆ ನೀಡಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.

ತಾಲ್ಲೂಕಿನ ಗಾವಡಗೆರೆ ಹೋಬಳಿ ಭಾಗದ ಮರೂರು ಕಾಲುವೆ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ನಡುವೆ ಕ್ಷೇತ್ರದಲ್ಲಿ ಅಲ್ಲಲ್ಲಿ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದ ಅನುದಾನ ತಂದು ಕಾಮಗಾರಿ ನಡೆಸುತ್ತಿದ್ದೇನೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದ್ದ ಅನುದಾನವನ್ನು ಕಾಂಗ್ರೆಸ್ ಘೋಷಿಸಿದ ಯೋಜನೆಗಳಿಗೆ ನೀಡಿದ ಪರಿಣಾಮ ಅಭಿವೃದ್ಧಿ ಶೂನ್ಯವಾಗಿದೆ. ಈ ನಡುವೆಯೂ ಕ್ಷೇತ್ರದಲ್ಲಿ ಅಲ್ಲಲ್ಲಿ ಅಭಿವೃದ್ಧಿಗೆ ಅನುದಾನ ತರುವ ಪ್ರಯತ್ನ ನಡೆದಿದೆ ಎಂದರು.

₹2 ಕೋಟಿ ವೆಚ್ಚದಲ್ಲಿ ಮರೂರು ಕಾಲುವೆ ರಸ್ತೆ ₹2 ಅಭಿವೃದ್ಧಿ ನಡೆಯುತ್ತಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ  ಸ್ಥಳೀಯರು ನೋಡಿಕೊಳ್ಳಬೇಕು. ಗುತ್ತಿಗೆದಾರರು ಸಹ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದರು.

ADVERTISEMENT

ನಾಲೆ: ಹುಣಸೂರು ತಾಲ್ಲೂಕಿನ ಕೆರೆ ಕಟ್ಟೆಗಳಿಂದ ಹರಿಯುವ ನಾಲಾ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನಾಲೆ ದುರಸ್ತಿ ಮತ್ತು ಸಿಮೆಂಟ್ ಲೈನಿಂಗ್ ಕಾಮಗಾರಿಗೆ ಜಲಸಂಪನ್ಮೂಲ ಸಚಿವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇನೆ. ಸಚಿವ ಸಂಪುಟದಲ್ಲಿ ₹ 900 ಕೋಟಿ ಕಾಮಗಾರಿಗೆ ಅನುಮೋದನೆ ಪಡೆದ ಬಳಿಕ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಹರವೆ ಶ್ರೀಧರ್, ಜಗದೀಶ್, ಮಹದೇವಪ್ಪ, ಫಾರೂಕ್, ಅಬ್ದುಲ್ ಸುಭಾನ್, ಹರೀಶ್ ಕಾವಲ್, ಸ್ವಾಮಿಗೌಡ, ಶಿವರಾಜು, ಡೈರಿ ಚಂದ್ರಣ್ಣ, ಎಳನೀರು ಚಂದ್ರನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.