
ಬಂಧನ (ಸಾಂದರ್ಭಿಕ ಚಿತ್ರ)
ಹುಣಸೂರು: ನಗರದ ಶಬ್ಬೀರ್ ನಗರದಲ್ಲಿ ನ.6 ರಂದು ಸಾಲಿಗ್ರಾಮ ತಾಲ್ಲೂಕಿನ ಹೊನ್ನೇನಹಳ್ಳಿ ಪಂಚಾಯಿತಿ ಸದಸ್ಯ ಕಿಜರ್ ಪಾಷ (45) ಅವರನ್ನು ಹತ್ಯೆ ಮಾಡಿದ್ದ ಆರೋಪದಲ್ಲಿ ಮೂವರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ಎಜಾಜ್ ಪಾಷ (45) ಮುಜೀಬ್ (35) ಮತ್ತು ಅಬ್ದುಲ್ಲಾ (25) ಅವರನ್ನು ಹಾಸನ ಜಿಲ್ಲೆ ಕೊಣನೂರು ಬಳಿ ಮಂಗಳವಾರ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ. ಇಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ’ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಎ.ಎಸ್.ಪಿ ಮಲ್ಲಿಕ್ ಮತ್ತು ಡಿವೈಎಸ್ಪಿ ರವಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದ್ದು, ತಂಡದಲ್ಲಿ ಅರುಣ್, ಪ್ರಸಾದ್, ಇರ್ಫಾನ್, ರಾಘು, ಜಮೀರ್ ಆಹಮ್ಮದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.