ADVERTISEMENT

ಹುಣಸೂರು: ಬೇಲಿಯಲ್ಲಿ ನವಜಾತ ಶಿಶು ಪತ್ತೆ– ರಕ್ಷಣೆ

ಪೊಲೀಸರು ಮಗುವನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದರು.

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2025, 14:54 IST
Last Updated 7 ಏಪ್ರಿಲ್ 2025, 14:54 IST
   

ಹುಣಸೂರು (ಮೈಸೂರು ಜಿಲ್ಲೆ): ತಾಲ್ಲೂಕಿನ ಮಂಗಳೂರು ಮಾಳ ಹಾಡಿಯ ಮನೆಯೊಂದರ ಹಿಂದಿನ ಪೊದೆಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಪೊಲೀಸರು ಮಗುವನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದರು.

‘ಮಗು ಅಳುತ್ತಿರುವ ಶಬ್ಧ ಕೇಳಿಸಿ, ಸ್ಥಳೀಯರು ಹುಡುಕಾಡಿದಾಗ ಬೇಲಿಯಲ್ಲಿ ಶಿಶು ಪತ್ತೆಯಾಗಿದೆ. ಅವರು ಹುಣಸೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದೇವೆ’ ಎಂದು ಇನ್‌ಸ್ಪೆಕ್ಟರ್‌ ಮುನಿಯಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT