ADVERTISEMENT

ಹುಣಸೂರು: ಹುಲಿ ದಾಳಿಗೆ ನವವಿವಾಹಿತ ಕುರಿಗಾಹಿ ಸಾವು

​ಪ್ರಜಾವಾಣಿ ವಾರ್ತೆ
Published 26 ಮೇ 2025, 16:09 IST
Last Updated 26 ಮೇ 2025, 16:09 IST
ಹರೀಶ್
ಹರೀಶ್   

ಹುಣಸೂರು (ಮೈಸೂರು ಜಿಲ್ಲೆ): ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ 5ನೇ ಬ್ಲಾಕ್ ನಿವಾಸಿ ಹರೀಶ್ (29) ಕುರಿ ಮೇಯಿಸುತ್ತಿದ್ದಾಗ ಸೋಮವಾರ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಮೂರು ತಿಂಗಳ ಹಿಂದಷ್ಟೆ ಅವರ ಮದುವೆಯಾಗಿತ್ತು.

ಕುರಿ ಹಿಂಡಿನೊಂದಿಗೆ ಕುರುಚಲು ಅರಣ್ಯ ಪ್ರದೇಶಕ್ಕೆ ತೆರಳಿದ್ದಾಗ ಪೊದೆಯಲ್ಲಿ ಅಡಗಿದ್ದ ಹುಲಿ ದಾಳಿ ನಡೆಸಿತ್ತು. ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿದ್ದ ಅವರನ್ನು ಸ್ಥಳೀಯರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಮ್ಮದ್ ಫೈಜಲ್ ಮತ್ತು ವಲಯ ಅರಣ್ಯಾಧಿಕಾರಿ ನಂದಕುಮಾರ್ ಭೇಟಿ ನೀಡಿದ್ದರು. ಇಲಾಖೆಯಿಂದ ಪರಿಹಾರ ನೀಡುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT