ADVERTISEMENT

ಮಾಡಾಳ್‌ಗೆ ಜಾಮೀನು: ಗಮನಕ್ಕೆ ಬಂದಿಲ್ಲ– ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 10:24 IST
Last Updated 7 ಮಾರ್ಚ್ 2023, 10:24 IST
   

ಮೈಸೂರು: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ನಾನು ವಿಮಾನದಲ್ಲಿದ್ದರಿಂದ ವಿಷಯ ಗೊತ್ತಾಗಿಲ್ಲ. ಆದರೆ, ಹೈಕೋರ್ಟ್ ತೀರ್ಮಾನವನ್ನು ನಾನು ವಿಶ್ಲೇಷಣೆ ಮಾಡಲು ಬಯಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.