
ಮೈಸೂರು: ‘ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಹೈಕಮಾಂಡ್ ಇಲ್ಲಿಯವರೆಗೂ ಕರೆದಿಲ್ಲ. ಕರೆದರೆ ಹೋಗುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.
‘ಬಿಜೆಪಿ ಆಡಳಿತದ ಭ್ರಷ್ಟಾಚಾರದಿಂದ ಅಲ್ಲಿ ಆಡಳಿತ ವಿರೋಧಿಯ ಅಲೆ ಇದೆ. ನಿತೀಶ್ ಕುಮಾರ್ ಬಗ್ಗೆ ಜನರಿಗೆ ಬೇಸರವಿದೆ. ವಿರೋಧ ಪಕ್ಷಗಳ ಮಹಾಮೈತ್ರಿಕೂಟವು ಜಯ ಸಾಧಿಸಲಿದೆ’ ಎಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ನಿತೀಶ್ ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಅಧಿಕಾರಕ್ಕಾಗಿ ಪಕ್ಷಗಳನ್ನೂ ಬದಲಾಯಿಸಿದ್ದಾರೆ. ಜನರು ಇಂಡಿಯಾ ಒಕ್ಕೂಟಕ್ಕೆ ಮತ ಚಲಾಯಿಸಲಿದ್ದಾರೆ. ನಿತೀಶ್ ನಮ್ಮ ಗ್ಯಾರಂಟಿಗಳನ್ನೇ ಚುನಾವಣೆಗಾಗಿ ಘೋಷಿಸಿದ್ದಾರೆ. ಅವರನ್ನು ಜನ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರು ಇದ್ದು, ಅವರಿಗೂ ನಮ್ಮ ಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.