ADVERTISEMENT

ಐಎಎಸ್‌ ಅಧಿಕಾರಿ ಶರತ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 2:12 IST
Last Updated 20 ಅಕ್ಟೋಬರ್ 2020, 2:12 IST
ಬಿ. ಶರತ್‌
ಬಿ. ಶರತ್‌    

ಮೈಸೂರು: ಐಎಎಸ್‌ ಅಧಿಕಾರಿ ಬಿ.ಶರತ್‌ ಅವರು ಅನಾರೋಗ್ಯದ ಕಾರಣ ಇಲ್ಲಿ ಕುವೆಂಪುನಗರದ ಭಾನವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಅ.17ರಂದು ಆಸ್ಪತ್ರೆಗೆ ದಾಖಲಾ ಗಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಶರತ್‌ ಅವರ ಆಪ್ತ ಮೂಲಗಳು ತಿಳಿಸಿವೆ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವರನ್ನು ಕೇವಲ 29 ದಿನಗಳಲ್ಲಿ ವರ್ಗಾವಣೆ ಮಾಡಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ಅ.23ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.