ADVERTISEMENT

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 8:21 IST
Last Updated 7 ಜುಲೈ 2021, 8:21 IST
   

ಮೈಸೂರು: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಲ್ಲಿನ ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್)ದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಈ ಯೋಜನೆಯ ವಿಳಂಬಕ್ಕೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆ ಡಿ ಎಸ್ ಮೂರೂ ಪಕ್ಷಗಳು ಕಾರಣ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧೈರ್ಯ ಇದ್ದರೆ ಒಂದು ವಾರದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು .

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.