ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಆನೆಯೊಂದು ತನ್ನ ಮಾವುತ ಹರೀಶ್ (37) ಎಂಬುವವರನ್ನು ಸೊಂಡಿಲಿನಿಂದ ಕೆಳಗೆ ದೂಡಿದ್ದು, ಗಾಯಗೊಂಡ ಇವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆಲ ದಿನಗಳಿಂದ ರಜೆ ಹಾಕಿದ್ದ ಇವರು, ಶುಕ್ರವಾರ ಕರ್ತವ್ಯಕ್ಕೆ ಹಾಜರಾಗಿ ಆನೆಗೆ ಹುಲ್ಲು ಹಾಕುವಾಗ ಈ ಘಟನೆ ನಡೆದಿದೆ. ಗಾಯಗೊಂಡ ಇವರನ್ನು ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.