ADVERTISEMENT

ನಂಜನಗೂಡು: ಬಸವರಾಜ ಸ್ವಾಮಿ ಗದ್ದುಗೆ ಉದ್ಘಾಟನೆ, ಉತ್ಸವ 7ರಿಂದ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 14:29 IST
Last Updated 3 ಫೆಬ್ರುವರಿ 2025, 14:29 IST

ನಂಜನಗೂಡು: ‘ತಾಲ್ಲೂಕಿನ ಶಿರಮಳ್ಳಿ ಗ್ರಾಮದ ಮುರುಗಿ ಮಠದಲ್ಲಿ ಫೆ.7 ಮತ್ತು 8ರಂದು ಬಸವರಾಜ ಸ್ವಾಮಿ ಗದ್ದುಗೆ ಉದ್ಘಾಟನೆ, ರಾಜದ್ವಾರ ಲೋಕಾರ್ಪಣೆ ಹಾಗೂ ಮಠದ ಸ್ವಾಮಿಯ 11 ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ನಡೆಯಲಿದೆ’ ಎಂದು ಮಠಾಧ್ಯಕ್ಷ ಇಮ್ಮಡಿ ಮುರುಗಿ ಸ್ವಾಮೀಜಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘450 ವರ್ಷಗಳ ಇತಿಹಾಸ ಹೊಂದಿರುವ ಮುರುಗಿ ಮಠ, ಬಸವಬಳಗ, ಅಕ್ಕನಬಳಗ ಆರಂಭಿಸಿ ಭಕ್ತರಿಗೆ ಸಂಸ್ಕಾರವನ್ನು ಪಸರಿಸುತ್ತಿದೆ. ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ದೇವನೂರು ಮಠದ ಮಹಾಂತಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ, ವಾಟಾಳು ಮಠದ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ದೇಗುಲ ಮಠದ ಚೆನ್ನಬಸವಸ್ವಾಮೀಜಿ ಸಾನ್ನಿಧ್ಯವಹಿಸುವರು’ ಎಂದರು.

‘ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಸಂಕರಪ್ಪ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಘಾಲಯ ರಾಜ್ಯಪಾಲ ಸಿ.ಎಚ್‌.ವಿಜಯಶಂಕರ, ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ದರ್ಶನ್ ಧ್ರುವನಾರಾಯಣ, ಗಣೇಶ್ ಪ್ರಸಾದ್, ಮಹಾಸಭಾ ಅಧ್ಯಕ್ಷ ಶಂಕರ್ ಎಂ.ಬಿದರಿ ಭಾಗವಹಿಸುವರು. ಕಾರ್ಯಕ್ರಮದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.