ADVERTISEMENT

74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 3:51 IST
Last Updated 14 ಆಗಸ್ಟ್ 2020, 3:51 IST
ಸ್ವಾತಂತ್ರ್ಯೋತ್ಸವ ದಿನಾಚರಣೆಗಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಗುರುವಾರ ಪರೇಡ್‌ ಪ್ರದರ್ಶನದ ತಾಲೀಮು ನಡೆಸಲಾಯಿತು
ಸ್ವಾತಂತ್ರ್ಯೋತ್ಸವ ದಿನಾಚರಣೆಗಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಗುರುವಾರ ಪರೇಡ್‌ ಪ್ರದರ್ಶನದ ತಾಲೀಮು ನಡೆಸಲಾಯಿತು   

ಮೈಸೂರು: ಜಿಲ್ಲಾಡಳಿತ ವತಿಯಿಂದ ಶನಿವಾರ ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 74ನೇಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ಆಸನ ಜೋಡಿಸಿ, ಶಾಮಿಯಾನ ಹಾಕಲಾಗಿದೆ. ಪರೇಡ್‌ ಪ್ರದರ್ಶನದ ತಾಲೀಮು ಗುರುವಾರ ನಡೆಯಿತು. ಸಿವಿಲ್ ಪೊಲೀಸ್‌, ಕೆಎಸ್‌ಆರ್‌ಪಿ, ಸಿಎಆರ್‌, ಡಿಎಆರ್‌, ಮೌಂಟೆಡ್‌ ಪೊಲೀಸ್‌, ಅಗ್ನಿಶಾಮಕ ದಳ, ಗೃಹರಕ್ಷಕ ದಳದ ತುಕಡಿಗಳು ಪಾಲ್ಗೊಂಡಿದ್ದವು.

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಶಾಲಾ ಮಕ್ಕಳು ನಡೆಸಿಕೊಡುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೋವಿಡ್‌–19 ಕಾರಣದಿಂದಾಗಿ ಈ ಬಾರಿ ಇರುವುದಿಲ್ಲ.

ADVERTISEMENT

ಸಮಾರಂಭದಲ್ಲಿ ಪಥಸಂಚಲನ ಹಾಗೂ ಸ್ವಾತಂತ್ರ್ಯೋತ್ಸವ ಅಂಗವಾಗಿ ತ್ರಿವರ್ಣ ಬಲೂನುಗಳನ್ನು ಹಾರಿಬಿಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಕೊರೊನಾ ವಾರಿಯರ್‌ಗಳಾದ ವೈದ್ಯರು, ನರ್ಸ್‌ಗಳು, ಪೊಲೀಸರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಅವರನ್ನು ಅಭಿನಂದಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.