
ಮೈಸೂರು: ‘ಭಾರತ–ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದವು ದೇಶದ ರೈತರ ಮರಣ ಶಾಸನವಾಗಿದೆ’ ಎಂದು ಆರೋಪಿಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದವರು, ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಗನ್‌ಹೌಸ್ ವೃತ್ತ ಬಳಿಯ ಕುವೆಂಪು ಉದ್ಯಾನದಲ್ಲಿ ಭಾನುವಾರ ಸಂಘಟನೆಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅಧ್ಯಕ್ಷತೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ಕರೆಯ ಮೇರೆಗೆ ಪ್ರತಿಭಟನೆ ನಡೆಯಿತು. ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪಾಲ್ಗೊಂಡಿದ್ದರು. ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
‘ಕೃಷಿ ಹಾಗೂ ಹೈನು ಉತ್ಪನ್ನಗಳು ಅಮೆರಿಕದಿಂದ ಭಾರತದ ದೇಶಕ್ಕೆ ಆಮದಾಗಲು ಯಾವುದೇ ಸುಂಕವಿಲ್ಲದೆ ವಿನಾಯಿತಿ ನೀಡಿರುವುದು ನಮ್ಮ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇಲ್ಲದಂತಾಗುತ್ತದೆ. ಜೊತೆಗೆ ದೇಶದ ಉತ್ಪನ್ನಗಳಿಗೆ ಬೆಲೆ ದೊರೆಯುವುದಿಲ್ಲ. ಇದರಿಂದ ರೈತರು ಸಾಲಗಾರರಾಗುತ್ತಾರೆ, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತವೆ’ ಎಂದು ಕುರುಬೂರು ಶಾಂತಕುಮಾರ್ ಕಳವಳ ವ್ಯಕ್ತಪಡಿಸಿದರು.
‘ಕೇಂದ್ರ ಸರ್ಕಾರ ಕೂಡಲೇ ಒಪ್ಪಂದದಿಂದ ಹೊರ ಬರಬೇಕು. ಇಲ್ಲದಿದ್ದರೆ ಸಂಸದರು, ಕೇಂದ್ರ ಸಚಿವರಿಗೆ ಘೇರಾವ್ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡರಾದ ಲಕ್ಷ್ಮೀಪುರ ವೆಂಕಟೇಶ್, ವರಕೂಡು ನಾಗೇಶ್, ಮಾರ್ಬಳ್ಳಿ ನೀಲಕಂಠಪ್ಪ ಮತ್ಲಿತರರು ಪಾಲ್ಡೊಂಡಿದ್ದ್ು.ರದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.