ADVERTISEMENT

ಹುಣಸೂರು | ಅಪಘಾತದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 24 ಮೇ 2025, 14:13 IST
Last Updated 24 ಮೇ 2025, 14:13 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಹುಣಸೂರು: ಕಾರು ಹಾಗೂ ಆಟೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಆಟೊ ಚಾಲಕ ದಿನೇಶ್ (40) ಶುಕ್ರವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ADVERTISEMENT

ತಾಲ್ಲೂಕಿನ ಕಾಡನಕೊಪ್ಪಲು ಗೇಟ್‌ ಬಳಿ ಮೇ20 ರಂದು ಪತ್ನಿಯೊಂದಿಗೆ ಆಟೊದಲ್ಲಿ ಹುಣಸೂರಿನತ್ತ ಬರುತ್ತಿದ್ದ ವೇಳೆ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಶುಕ್ರವಾರ ರಾತ್ರಿ ಮೃತಪಟ್ಟರು.

ಸ್ವಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಿತು. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.