ಪ್ರಾತಿನಿಧಿಕ ಚಿತ್ರ
ಮೈಸೂರು: ‘ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿರುದ್ಧ ಒಳ ಮೀಸಲಾತಿ ಹೋರಾಟದ ನೆಪದಲ್ಲಿ ಬಿ.ಆರ್.ಭಾಸ್ಕರ್ ಪ್ರಸಾದ್ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಮುಂದುವರಿಸಿದಲ್ಲಿ ರಾಜ್ಯ ಆದಿಜಾಂಬವ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ವಿಭಾಗೀಯ ಅಧ್ಯಕ್ಷ ಎಡತೊರೆ ಎಂ.ನಿಂಗರಾಜ್ ಎಚ್ಚರಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಹೋರಾಟ ಮಾಡುವವರಿಗೆ ಸುಸಂಸ್ಕೃತ ನಡೆ, ಆರೋಗ್ಯಕರ ಟೀಕೆ ಮಾಡುವ ಅರಿವಿರಬೇಕು. ವಿರೋಧ ಪಕ್ಷದ ಕುಮ್ಮಕ್ಕಿನಿಂದ ಭಾಸ್ಕರ್ ಪ್ರಸಾದ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಸರ್ಕಾರವಿದ್ದಾಗ ಒಳ ಮೀಸಲಾತಿ ಬಗ್ಗೆ ಧ್ವನಿ ಎತ್ತದ ಅವರು, ಕಾಂಗ್ರೆಸ್ ಸರ್ಕಾರವು ಜಾರಿಗೆ ಮುಂದಾಗಿರುವ ವೇಳೆ ಹೋರಾಟ ಆರಂಭಿಸಿ ಸಮುದಾಯದ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.
ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ವಿಜಯ್‌ಕುಮಾರ್ ಸೀಗೂರು, ತಾಲ್ಲೂಕು ಘಟಕದ ಅಧ್ಯಕ್ಷ ಶೇಖರ್ ಮಾರ್ಬಳ್ಳಿ, ಮುಖಂಡರಾದ ಕೆ.ಆರ್.ರಾಚಯ್ಯ, ಎಂ.ಎಸ್.ಮಹದೇವ್, ರಾಚಪ್ಪ ಸಿ.ಜೆಟ್ಟಿಹುಂಡಿ, ದೇವರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.