ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶನಿವಾರ ಯೋಗಪಟುಗಳು, ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.
ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರು: ಮುಂಜಾನೆಯ ಚುಮು ಚುಮು ಚಳಿಯ ನಡುವೆ ನಗರದಲ್ಲಿ 'ಓಂಕಾರ' ಪ್ರತಿಧ್ವನಿಸಿತು. ವಿವಿಧ ಆಸನಗಳ ಮೂಲಕ ಯೋಗಪಟುಗಳು ಎಲ್ಲರ ಗಮನಸೆಳೆದರು.
ಭಾರತ ಸರ್ಕಾರ, ಕರ್ನಾಟಕ ಸರ್ಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಭಾರತೀಯ ಭಾಷಾ ಸಂಸ್ಥಾನ, ಮೈಸೂರು ಅರಮನೆ ಮಂಡಳಿ, ಜೆ.ಎಸ್.ಎಸ್ ಮಹಾವಿದ್ಯಾಪೀಠ, ಪ್ರವಾಸೋದ್ಯಮ ಇಲಾಖೆ, ಗಣಪತಿ ಸಚ್ಚಿದಾನಂದ ಆಶ್ರಮದ ಸಹಯೋಗದಲ್ಲಿ ಶನಿವಾರ ಅಯೋಜಿಸಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಸಾವಿರಾರು ಯೋಗಪಟುಗಳು ಭಾಗವಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯೋಗ ಗುರು ಪಿ.ಎನ್.ಗಣೇಶ್ ಕುಮಾರ್ ಶಂಖನಾದ ಮೊಳಗಿಸಿ ಯೋಗಾಭ್ಯಾಸ ಆರಂಭಿಸಿದರು. ನಗರದ ವಿವಿಧ ಯೋಗ ಸಂಘಟನೆಗಳು ವಿವಿಧ ಆಸನಗಳನ್ನು ಮಾಡಿದರು. ಈ ಬಾರಿ ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳ ಹಾಗೂ ಅಂಧ ಮಕ್ಕಳು ಭಾಗವಹಿಸಿರುವುದು ವಿಶೇಷವಾಗಿತ್ತು. 45 ನಿಮಿಷ ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದರು.
ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶನಿವಾರ ಯೋಗಪಟುಗಳು, ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.
ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶನಿವಾರ ಯೋಗಪಟುಗಳು, ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.