ADVERTISEMENT

ಭವಾನಿ ರೇವಣ್ಣ ಸಂಬಂಧಿ ಮನೆ ಮೇಲೂ ಐ.ಟಿ ದಾಳಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2019, 19:52 IST
Last Updated 28 ಮಾರ್ಚ್ 2019, 19:52 IST
ಭವಾನಿ ರೇವಣ್ಣ
ಭವಾನಿ ರೇವಣ್ಣ   

ಮೈಸೂರು: ಇಲ್ಲಿನ ಬೋಗಾದಿಯಲ್ಲಿ ವಾಸವಿರುವ ಭವಾನಿ ರೇವಣ್ಣ ಅವರ ಸೋದರ ಸಂಬಂಧಿ ಡಾ.ಮಂಜುನಾಥ್ ಅವರ ನಿವಾಸದ ಮೇಲೂ ಗುರುವಾರ ಸಂಜೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ 10ಕ್ಕೂ ಹೆಚ್ಚು ಅಧಿಕಾರಿಗಳನ್ನು ಒಳಗೊಂಡ ತಂಡ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲಾತಿ ಪರಿಶೀಲನೆಯಲ್ಲಿ ತೊಡಗಿತ್ತು ಎಂದು ಮೂಲಗಳು ತಿಳಿಸಿವೆ.

ಜೆ.ಪಿ.ನಗರ ಹಾಗೂ ಹುಣಸೂರಿನಲ್ಲೂ ಜೆಡಿಎಸ್ ಮುಖಂಡರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಅದಿನ್ನೂ ಖಚಿತವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.