ADVERTISEMENT

ಮೈಸೂರು ಜೈಲಿನ ತಪಾಸಣೆಯಲ್ಲಿ ಸಿಕ್ಕಿದ್ದು ₹ 1,900!

ನೂರಾರು ಪೊಲೀಸರಿಂದ ದಿಢೀರ್ ದಾಳಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 20:33 IST
Last Updated 15 ಏಪ್ರಿಲ್ 2019, 20:33 IST
ಲೋಕಸಭಾ ಚುನಾವಣಾ ಸಂಬಂಧ ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ನಗರ ಪೊಲೀಸರು ಸೋಮವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು
ಲೋಕಸಭಾ ಚುನಾವಣಾ ಸಂಬಂಧ ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ನಗರ ಪೊಲೀಸರು ಸೋಮವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು   

ಮೈಸೂರು: ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ 175 ‍ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಏಕಕಾಲಕ್ಕೆ ಸೋಮವಾರ ನಡೆಸಿದ ದಿಢೀರ್ ದಾಳಿಯಲ್ಲಿ ಸಿಕ್ಕಿದ್ದು ₹ 1,900. ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಈ ದಾಳಿ ಕೈಗೊಂಡಿತ್ತು.

ಸುಮಾರು 17 ವಿವಿಧ ತಂಡಗಳಲ್ಲಿ ಪೊಲೀಸರು ದಾಳಿ ನಡೆಸಿದರು. ಪರಿಶೀಲಿಸಲು ಜೈಲು ಅಧಿಕಾರಿಗಳು ಮುಕ್ತ ಅವಕಾಶ ನೀಡಿದರು. ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಜೈಲಿನ ಎಲ್ಲ ಬ್ಯಾರಕ್‌ಗಳನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಮೊಬೈಲ್‌ಗಳು, ಗಾಂಜಾ, ಸಿಗರೇಟು, ಹಣ, ಆಯುಧಗಳು ಸಿಗಬಹುದು ಎಂಬ ಲೆಕ್ಕಾಚಾರ ತಪ್ಪಾಯಿತು.

ಈ ದಾಳಿಯನ್ನು ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ನಡೆಸಲಾಗಿದೆ. ಮಾದಕವಸ್ತುಗಳು ಹಾಗೂ ಮಾರಕಾಸ್ತ್ರಗಳು ಇಲ್ಲಿ ಸಿಕ್ಕಿಲ್ಲ. ಸದ್ಯ ಸಿಕ್ಕಿರುವ ₹ 1,900 ಹಣದ ಕುರಿತು ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.