ಜಯಪುರ: ಹೋಬಳಿ ವ್ಯಾಪ್ತಿಯ ಕೋಟೆಹುಂಡಿ ಗ್ರಾಮದ ಮುಖ್ಯರಸ್ತೆಯಲ್ಲಿಯೇ ಕೊಳೆತ ತ್ಯಾಜ್ಯದ ರಾಶಿಯನ್ನು ಸುರಿಯುತ್ತಿದ್ದಾರೆ
ಕೊಳೆತ ತ್ಯಾಜ್ಯ ತಿನ್ನಲು ನಾಯಿಗಳು ಮತ್ತು ಹಂದಿಗಳು ಬೀಡು ಬಿಟ್ಟಿದ್ದು, ರಸ್ತೆಯಲ್ಲಿ ಓಡಾಡುವ ಜನರು, ವಾಹನ ಸವಾರರನ್ನು ಕಚ್ಚಲು ಯತ್ನಿಸುತ್ತಿವೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದ್ದು, ಜನರು ಈ ರಸ್ತೆಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಧನಗಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಕಸದ ತ್ಯಾಜ್ಯ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮದ ನೈರ್ಮಲ್ಯ ಕಾಪಾಡಬೇಕು.ಲೋಕೇಶ್, ಕೋಟೆಹುಂಡಿ ಗ್ರಾಮ ನಿವಾಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.