ADVERTISEMENT

ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 10:52 IST
Last Updated 4 ಡಿಸೆಂಬರ್ 2021, 10:52 IST
   

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ. ಜನರೇ ಅವರನ್ನು ಉಚ್ಚಾಟಿಸಲಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶನಿವಾರ ಇಲ್ಲಿ ತಿಳಿಸಿದರು.

ಯಾರದ್ದೊ ಕಲ್ಯಾಣಕ್ಕಾಗಿ, ಯಾರನ್ನೋ (ಸಿದ್ದರಾಮಯ್ಯ) ಮುಖ್ಯಮಂತ್ರಿ ಮಾಡಲು ಜಿ.ಟಿ.ದೇವೇಗೌಡರು ದೇಗುಲದಲ್ಲಿ ಕಲ್ಯಾಣೋತ್ಸವ ಮಾಡಿಸಿದ್ದಾರೆ. ಆದರೆ, ನಾನು ಬಡವರ, ರೈತರ ಕಲ್ಯಾಣಕ್ಕಾಗಿ ಹೋರಾಡುತ್ತೇನೆ ಎಂದರು.

ಜಿ.ಟಿ.ದೇವೇಗೌಡ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ನಾನು, ಎಚ್.ಡಿ.ದೇವೇಗೌಡ ಹಾಗೂ ಪುತ್ರ ನಿಖಿಲ್ ಪ್ರಯತ್ನಿಸಿದೆವು‌ ಎಂದು ಹೇಳಿದರು.

ADVERTISEMENT

ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಮ್ ಎಂಬ ಸಿದ್ದರಾಮಯ್ಯ ಟೀಕೆಗೆ, 'ಸಿದ್ದರಾಮಯ್ಯ ಅದನ್ನೇ ಎಷ್ಟು ಬಾರಿ ಹೇಳಿ ಬಾಯಿ ನೋಯಿಸಿಕೊಳ್ಳುತ್ತಾರೆ. ಆ ಹೇಳಿಕೆಯನ್ನು ಸ್ಲೇಟ್‌ನಲ್ಲಿ ಬರೆದು ಕುತ್ತಿಗೆಗೆ ನೇತು ಹಾಕಿಕೊಳ್ಳಲಿ' ಎಂದು ತಿರುಗೇಟು ನೀಡಿದರು.

ಮೈಸೂರು- ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ‌‌ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚಿಸಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.