
ಬೆಟ್ಟದಪುರ: ‘ಪ್ರತಿ ಬೂತ್ ಮಟ್ಟದಲ್ಲಿಯೂ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಿ, ಪಕ್ಷದ ವಿಚಾರವನ್ನು ಎಲ್ಲರಿಗೂ ತಲುಪಿಸಬೇಕು’ ಎಂದು ಮಾಜಿ ಶಾಸಕ ಕೆ.ಮಹದೇವ್ ತಿಳಿಸಿದರು.
ದೊಡ್ಡ ಕಮರವಳ್ಳಿ ಗ್ರಾಮದಲ್ಲಿ, ಬುಧವಾರ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಳೆದೆರಡೂವರೆ ವರ್ಷದಿಂದ ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ಕ್ಷೇತ್ರದ ಜನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ, ಅಧಿಕಾರ ಇಲ್ಲದೆ ಇದ್ದಾಗ ಹೋರಾಟ ಮಾಡುವುದು ಸುಲಭದ ಮಾತಲ್ಲ ಆದರೂ ನಮ್ಮ ಕಾರ್ಯಕರ್ತರ ಪರವಾಗಿ ಎಂದಿಗೂ ನಿಮ್ಮೊಂದಿಗೆ ನಾನಿದ್ದೇನೆ’ ಎಂದರು.
ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮಾತನಾಡಿ, ‘ಕಾರ್ಯಕರ್ತರು ಪ್ರತಿ ಹಂತದಲ್ಲಿಯೂ ಜೆಡಿಎಸ್ ಪಕ್ಷದ ಸಿದ್ಧಾಂತ ಹಾಗೂ ಜನರಿಗೆ ಕೊಟ್ಟಿರುವ ಕೊಡುಗೆಗಳ ಬಗ್ಗೆ ಅವರಿಗೆ ಮನದಟ್ಟು ಮಾಡಬೇ. ಮುಂಬರುವ ಚುನಾವಣೆಗಳಲ್ಲಿ ಪಕ್ಷ ಗೆಲುವು ಸಾಧಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದು ಸಲಹೆ ನೀಡಿದರು.
ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಕಾರ್ಯಕರ್ತರ ಸಭೆ ನಡೆಸಲಾಯಿತು. ನವೀನ್, ಮಂಜು, ಸೋಮಶೇಖರ್, ಚಂದ್ರು, ಕೃಷ್ಣ, ನಿರಂಜನ್, ಕೃಷ್ಣಪ್ಪ, ಮೋಹನ್ ರಾಜ್, ಕೃಷ್ಣೇಗೌಡ, ಅಣ್ಣಯ್ಯ, ಯೋಗೇಶ್, ಹರೀಶ್, ಮಲ್ಲಿಕಾರ್ಜುನ, ಮಲ್ಲೇಶ್, ರಘು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.