ಮೈಸೂರು: ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಬಿ.ಚೈತ್ರಾ ಹೇಳಿದರು.
ಇಲ್ಲಿನ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಯಲ್ಲಿ ಮಾತನಾಡಿ, ‘ಕ್ರೀಡೆಯಿಂದ ಉದ್ಯೋಗದ ಅವಕಾಶಗಳು ಬರುತ್ತವೆ. ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.
ಕಾಲೇಜಿನ ಪ್ರಾಂಶುಪಾಲ ಕೆ.ಪ್ರಹ್ಲಾದ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.