ADVERTISEMENT

‘ವಡ್ಡ’ ಹೇಳಿಕೆ: ಈಶ್ವರಪ್ಪಗೆ ಭೋವಿ ಸಮಾಜದಿಂದ ಘೇರಾವ್‌

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 18:13 IST
Last Updated 22 ಸೆಪ್ಟೆಂಬರ್ 2019, 18:13 IST
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಭೋವಿ ಸಮಾಜದವರು ಪ್ರತಿಭಟನೆ ನಡೆಸಿದರು
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಭೋವಿ ಸಮಾಜದವರು ಪ್ರತಿಭಟನೆ ನಡೆಸಿದರು   

ಮೈಸೂರು: ಸಿದ್ದರಾಮಯ್ಯ ಅವರನ್ನು ನಿಂದಿಸುವ ಭರದಲ್ಲಿ ‘ವಡ್ಡ’ ಎಂಬ ಶಬ್ದ ಪ್ರಯೋಗ ಮಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಚಾಮುಂಡಿಬೆಟ್ಟದಲ್ಲಿ ಭೋವಿ ಸಮಾಜದವರು ಭಾನುವಾರ ಘೇರಾವ್‌ ಹಾಕಿದ್ದಾರೆ.

ಚಾಮುಂಡೇಶ್ವರಿ ದರ್ಶನ ಪಡೆಯಲು ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ‘ಗೋ ಬ್ಯಾಕ್‌’ ಎಂದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ತಳ್ಳಾಟ ನಡೆದಿದ್ದು, ಇದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

‘ಮಾತುಮಾತಿಗೂ ಈಶ್ವರಪ್ಪ ನಮ್ಮ ಸಮಾಜದ ಕುರಿತು ಜಾತಿ ನಿಂದಿಸುತ್ತಿದ್ದಾರೆ. ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು. ತೋಳ್ಬಲದಿಂದ ಬದುಕುತ್ತಿರುವ ನಮ್ಮ ಸಮಾಜವನ್ನು ಕೀಳಾಗಿ ನೋಡಲಾಗುತ್ತಿದೆ’ ಎಂದು ಸಮಾಜದ ಮುಖಂಡ ಜಿ.ವಿ.ಸೀತಾರಾಂ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.