ಮೈಸೂರು: ಏಪ್ರಿಲ್ 14ರಂದು ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ–ಸೆಟ್)ಯನ್ನು ಮುಂದೂಡಲಾಗಿದೆ.
ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೇಂದ್ರ ಸರ್ಕಾರವು 3 ವಾರಗಳ ಕಾಲ ‘ಲಾಕ್ಡೌನ್’ ಘೋಷಿಸಿರುವುದರಿಂದ ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ‘ಕೆ–ಸೆಟ್’ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತಕುಮಾರ್ ಹಾಗೂ ‘ಕೆ–ಸೆಟ್’ ಸಂಯೋಜನಾಧಿಕಾರಿ ಪ್ರೊ.ಎಚ್.ರಾಜಶೇಖರ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.