ಬೆಟ್ಟದಪುರ: ಸಮೀಪದ ಸಂಗರಶೆಟ್ಟಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಕೆಂಪೇಗೌಡ ಯುವಕ ಸಂಘದಿಂದ 16 ವರ್ಷದ ಒಳಗಿನ ಯುವಕರಿಗೆ ಆಯೋಜಿಸಿದ್ದ ಕಬಡ್ಡಿ ಟೂರ್ನಿಯಲ್ಲಿ ಚೆನ್ನಂಗೆರೆ ತಂಡ ಪ್ರಥಮ ಸ್ಥಾನ ಹಾಗೂ ಸಂಗರಶೆಟ್ಟಹಳ್ಳಿ ತಂಡ ದ್ವಿತೀಯ ಸ್ಥಾನ ಪಡೆದವು. ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸಿದ್ದವು.
ಗ್ರಾಮದ ಮುಖಂಡ ಸತ್ಯಣ್ಣ ಮಾತನಾಡಿ, ‘ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ. ಕಬಡ್ಡಿ, ಕುಸ್ತಿ ಸೇರಿದಂತೆ ವಿವಿಧ ಆಟಗಳು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದುಕೊಂಡಿವೆ. ಇವು ದೈಹಿಕ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುತ್ತವೆ. ಇಂತಹ ಕ್ರೀಡಾಕೂಟ ಆಯೋಜನೆ ಮಾಡುವುದರಿಂದ ಗ್ರಾಮಾಂತರ ಭಾಗದ ಉದಯೋನ್ಮುಖ ಪ್ರತಿಭೆಗಳನ್ನು ಹೊರ ತರಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.
ಸಂಘದ ಮುಖಂಡರಾದ ಅನಿಲ್, ಪ್ರಕಾಶ್, ವಿಜಯ್, ಯೋಗೇಶ್ವರ್, ಸಂತೋಷ್, ಕೃಷ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.