ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ 5 ರಣಹದ್ದುಗಳು ಹಾಗೂ 1 ಸಾಕು ನಾಯಿ ಮೃತಪಟ್ಟಿದೆ.
ಅರಣ್ಯ ಸಿಬ್ಬಂದಿ ಬೋಟ್ ಮೂಲಕ ಗಸ್ತು ನಡೆಸುತ್ತಿದ್ದಾಗ ತೀರದಲ್ಲಿ ನಾಯಿ ಕಳೇಬರ ಕಂಡುಬಂದಿದೆ. ಕಳೇಬರ ತಿಂದು ರಣಹದ್ದುಗಳು ಸತ್ತಿರಬಹುದು ಎಂದು ಶಂಕಿಸಲಾಗಿದೆ.
‘ಕಳೇಬರಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬಂಡೀಪುರ ಪಶು ವೈದ್ಯಾಧಿಕಾರಿ ಡಾ.ವಾಸಿಮ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.