ADVERTISEMENT

ಕಡವೆ ಬೇಟೆ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 10:10 IST
Last Updated 17 ಡಿಸೆಂಬರ್ 2019, 10:10 IST
ಪಿರಿಯಾಪಟ್ಟಣ ತಾಲ್ಲೂಕಿನ ಆನೆಚೌಕೂರು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿ, ಮಾಂಸ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ
ಪಿರಿಯಾಪಟ್ಟಣ ತಾಲ್ಲೂಕಿನ ಆನೆಚೌಕೂರು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿ, ಮಾಂಸ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ   

ಪಿರಿಯಾಪಟ್ಟಣ: ತಾಲ್ಲೂಕಿನ ಆನೆಚೌಕೂರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿ, ಮಾಂಸ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯನ್ನು ವನ್ಯಜೀವಿ ಅರಣ್ಯ ವಲಯದ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಸ್ವಾಮಿ ಬಂಧಿತ ಆರೋಪಿ.

ಆನೆಚೌಕೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಲಕ್ಷ್ಮೀಪುರ ಗ್ರಾಮದ ತಂಬಾಕು ಬ್ಯಾರನ್‌ನಲ್ಲಿ ಕಡವೆ ಮಾಂಸ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆರ್‌ಎಫ್ಓ ಎಸ್.ಹನುಮಂತರಾಜ್ ನೇತೃತ್ವದ ತಂಡ 80 ಕೆ.ಜಿ. ಕಡವೆ ಮಾಂಸ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದೆ. ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.

ADVERTISEMENT

ಕಾರ್ಯಾಚರಣೆಯಲ್ಲಿ ಡಿಆರ್‌ಎಫ್ಓಗಳಾದ ರತ್ನಾಕರ, ನಂಜಪ್ಪ, ಅರಣ್ಯ ರಕ್ಷಕರಾದ ದಿವಾಕರ, ಸಂಜಯ್ ಕುಮಾರ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಪ್ರಸನ್ನ, ನಿಂಗರಾಜು, ಮಲ್ಲಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.