ADVERTISEMENT

ಕಲಾಮಂದಿರಲ್ಲಿನ ಉದ್ಯಾನ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 19:37 IST
Last Updated 15 ಜುಲೈ 2019, 19:37 IST
ಕಲಾಮಂದಿರದ ಆವರಣದಲ್ಲಿ ನಿರ್ಮಾಣಗೊಂಡಿರುವ ಉದ್ಯಾನ ಹಾಗೂ ಮಂಟಪಗಳನ್ನು ಸಾರ್ವಜನಿಕರು ಸೋಮವಾರ ವೀಕ್ಷಿಸಿದರು
ಕಲಾಮಂದಿರದ ಆವರಣದಲ್ಲಿ ನಿರ್ಮಾಣಗೊಂಡಿರುವ ಉದ್ಯಾನ ಹಾಗೂ ಮಂಟಪಗಳನ್ನು ಸಾರ್ವಜನಿಕರು ಸೋಮವಾರ ವೀಕ್ಷಿಸಿದರು   

ಮೈಸೂರು: ಇಲ್ಲಿನ ಕಲಾಮಂದಿರದ ಆವರಣದಲ್ಲಿ ಉದ್ಯಾನವೊಂದನ್ನು ಸೋಮವಾರ ಉದ್ಘಾಟಿಸಲಾಯಿತು.

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಕೆ.ಜಿ.ವಿಶ್ವನಾಥನ್ ಈ ಉದ್ಯಾನವನ್ನು ಲೋಕಾರ್ಪಣೆ ಮಾಡಿದರು.

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಸಿಎಸ್‍ಆರ್ ಅನುದಾನದಡಿ ₹ 41 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಈ ಉದ್ಯಾನವು ಇದೀಗ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಚಿಮ್ಮುವ ಕಾರಂಜಿಯೊಂದಿಗೆ ಲಘು ಸಂಗೀತವೂ ಇರುವುದು ಇಲ್ಲಿನ ವಿಶೇಷ.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಉಪ ವ್ಯವಸ್ಥಾಪಕ ನಿರ್ದೇಶಕ ಎಸ್.ಸುಂದರ್ ರಾಜ್, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ನಜೀರ್, ರಂಗಾಯಣದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಲಕ್ಷ್ಮೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.