ADVERTISEMENT

ಸಾಹಿತ್ಯ ಸಮ್ಮೇಳನಕ್ಕೆ ಸಹಕಾರ ಅಗತ್ಯ: ಶಾಸಕ ಕೆ.ಮಹದೇವ್

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 19:28 IST
Last Updated 16 ಅಕ್ಟೋಬರ್ 2018, 19:28 IST
ಪಿರಿಯಾಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವೈ.ಡಿ.ರಾಜಣ್ಣ ಮಾತನಾಡಿದರು
ಪಿರಿಯಾಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವೈ.ಡಿ.ರಾಜಣ್ಣ ಮಾತನಾಡಿದರು   

ಪಿರಿಯಾಪಟ್ಟಣ: ಡಿಸೆಂಬರ್‌ನಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲ ಸಂಘ ಸಂಸ್ಥೆಗಳು ಮತ್ತು ಕನ್ನಡಾಭಿಮಾನಿಗಳು ಸಹಕಾರ ನೀಡಬೇಕು ಎಂದು ಶಾಸಕ ಕೆ.ಮಹದೇವ್ ಮನವಿ ಮಾಡಿದರು.

ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕವು ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಸಾಪ ತಾಲ್ಲೂಕು ಘಟಕವು ಅತ್ಯಂತ ಕ್ರಿಯಾಶೀಲವಾಗಿದ್ದು, ಕನ್ನಡವನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ವೈ.ಡಿ.ರಾಜಣ್ಣ, ರಾವಂದೂರು ಮುರುಘಾ ಮಠದ ಮೋಕ್ಷಪತಿ ಸ್ವಾಮೀಜಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೊರಳ್ಳಿ ಜಗದೀಶ್ ಮಾತನಾಡಿದರು.

ತಹಶೀಲ್ದಾರ್ ಸೂರಜ್‌ ಕುಮಾರ್, ರೋಟರಿ ಸಂಸ್ಥೆ ಅಧ್ಯಕ್ಷ ಬಸವೇಗೌಡ, ಮಾಜಿ ಅಧ್ಯಕ್ಷ ಡಾ.ಪ್ರಕಾಶ್‌ ಬಾಬುರಾವ್, ಕಸಾಪ ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಮಹಮ್ಮದ್ ಶಫೀ, ಕೆಂಪರಾಜು, ಕಗ್ಗುಂಡಿ ರಾಜು, ಕೆ.ಆರ್.ಜಯಲಕ್ಷ್ಮಿ, ಟಿ.ರಾಜಣ್ಣ, ಶಿರಸ್ತೇದಾರ್ ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.