ADVERTISEMENT

ಸಂಗಮ ಆರತಿ: ನದಿ ಸ್ವಚ್ಛಗೊಳಿಸಿದ ಯುವ ಬ್ರಿಗೇಡ್ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 6:23 IST
Last Updated 17 ಡಿಸೆಂಬರ್ 2025, 6:23 IST
ತಿ. ನರಸೀಪುರ ಪಟ್ಟಣದ ಗುಂಜಾ ನರಸಿಂಹ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಸೋಪನಕಟ್ಟೆಯನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಛಗೊಳಿಸಿದರು
ತಿ. ನರಸೀಪುರ ಪಟ್ಟಣದ ಗುಂಜಾ ನರಸಿಂಹ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಸೋಪನಕಟ್ಟೆಯನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಛಗೊಳಿಸಿದರು   

ತಿ.ನರಸೀಪು: ಸಂಗಮ ಆರತಿ ಕಾರ್ಯಕ್ರಮದ ಅಂಗವಾಗಿ ಯುವ ಬ್ರಿಗೇಡ್ ಕಾರ್ಯಕರ್ತರು ಭಾನುವಾರ ಕಪಿಲಾ ನದಿಯಲ್ಲಿ‌  ತಂಗಿದ್ದ ಬಟ್ಟೆ, ತ್ಯಾಜ್ಯಗಳನ್ನು ತೆರವುಮಾಡಿ ಸ್ವಚ್ಛಗೊಳಿಸಿದರು.

ಕಾರ್ಯಕರ್ತರು ಪಟ್ಟಣದ ಗುಂಜಾನರಸಿಂಹಸ್ವಾಮಿ ದೇವಾಲಯದ ಮುಂಭಾಗದ ಸೋಪಾನ‌ ಕಟ್ಟೆಯ ಹಂತಗಳನ್ನು ಬೆಳಗ್ಗೆ ಸ್ವಚ್ಛಗೊಳಿಸಿದರು. ನದಿಯಲ್ಲಿ ಎಸೆಯಲಾಗಿದ್ದ ಬಟ್ಟೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಮೇಲೆತ್ತಿ ಸ್ವಚ್ಛಗೊಳಿಸಿದರು. ನದಿಯ ಪಕ್ಕದಲ್ಲಿದ್ದ ಗಿಡಗಂಟಿಗಳನ್ನು ತೆರೆವುಗೊಳಿಸಿದರು. ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ತಿ. ನರಸೀಪುರ ಪಟ್ಟಣದ ಗುಂಜಾ ನರಸಿಂಹ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಗಿಡ ಗಂಟಿಗಳನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಛಗೊಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT