ಪ್ರಾತಿನಿಧಿಕ ಚಿತ್ರ
ಮೈಸೂರು: ವಾರ್ತಾ ಇಲಾಖೆಯ ನಿವೃತ್ತ ಛಾಯಾ ಮತ್ತು ಚಲನಚಿತ್ರ ಅಧಿಕಾರಿ ಟಿ.ಕೆಂಪಣ್ಣ ಅವರು ತಾವು ತೆಗೆದಿರುವ ‘ಕರ್ನಾಟಕದ ಪ್ರಾಚೀನ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ’ವನ್ನು ಆ.19ರಿಂದ 21ರವರೆಗೆ ಇಲ್ಲಿನ ಕಲಾಮಂದಿರ ಆವರಣದ ಸುಚಿತ್ರಾ ಕಲಾಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದಾರೆ.
‘ಈ ವಿಶೇಷವಾದ ಛಾಯಾಚಿತ್ರಗಳ ಪ್ರದರ್ಶನವನ್ನು ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಆಯೋಜಿಸಿದ್ದೇನೆ. ನಮ್ಮ ಶಿಲ್ಪಕಲೆಯ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುವಂತೆ ಮಾಡುವುದು ನನ್ನ ಉದ್ದೇಶ. ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದ ಫೋಟೊಗಳನ್ನು ಪ್ರದರ್ಶಿಸಲಾಗುವುದು’ ಎಂದು ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಆ.19ರಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಸಂಪತ್ ಕುಮಾರ್ ಉದ್ಘಾಟಿಸುವರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಮೈಸೂರು ಪಾಲಿಮರ್ಸ್ ಮತ್ತು ರಬ್ಬರ್ ಪ್ರಾಡಕ್ಟ್ಸ್ ಪ್ರೈ.ಲಿ. ಸಿಇಒ ಜಿ. ರಾಜಗೋಪಾಲಯ್ಯ ಅಧ್ಯಕ್ಷತೆ ವಹಿಸುವರು’ ಎಂದು ಮಾಹಿತಿ ನೀಡಿದರು.
‘ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಛಾಯಾಗ್ರಾಹಕರ ಸಂಘದ ಹಿರಿಯರಾದ ರಾಮ್ ಪ್ರಸಾದ್, ಎಸ್. ತಿಪ್ಪೇಸ್ವಾಮಿ, ಜಂಬುಕೇಶ್ವರ, ಜಗದೀಶ್ ಹಾಗೂ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.
ಛಾಯಾಗ್ರಾಹಕರಾದ ಎಸ್.ತಿಪ್ಪೇಸ್ವಾಮಿ, ಪ್ರಗತಿ ಗೋಪಾಲಕೃಷ್ಣ, ಶಾಂತಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.