ಮೈಸೂರು: ಇಲ್ಲಿನ ಬಿಜೆಪಿ ಮುಖಂಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಹಾಗೂ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್ ಗುರುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇದರೊಂದಿಗೆ ಹಿಂದೆ ತಮ್ಮೊಂದಿಗಿದ್ದ ಬಸವೇಗೌಡ ಅವರನ್ನು ಸೆಳೆದುಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈಚೆಗೆ ಅವರ ನಿವಾಸದಲ್ಲೇ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದೇ ದಿನ ಸಂಜೆ ಬಿಜೆಪಿ ವರುಣ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹ ಕೂಡ ಭೇಟಿಯಾಗಿ ಬೆಂಬಲ ಕೋರಿದ್ದರು. ಬಸವೇಗೌಡರು ಇತ್ತೀಚೆಗೆ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಜೊತೆ ಗುರುತಿಸಿಕೊಂಡಿದ್ದರು.
ಅಬ್ದುಲ್ ಈ ಚುನಾವಣೆಯಲ್ಲೂ ನರಸಿಂಹರಾಜ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷದ ನಾಯಕರ ಧೋರಣೆಯಿಂದ ಬೇಸತ್ತು ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿರುವುದಾಗಿ ಈಚೆಗೆ ತಿಳಿಸಿದ್ದರು. ಈಗ, ಕಾಂಗ್ರೆಸ್ ತೆಕ್ಕೆಗೆ ಬಂದಿದ್ದಾರೆ.
ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಕೂಡ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ, ಕಾನೂನು ತೊಡಕು ಎದುರಾಗಿರುವ ಕಾರಣದಿಂದ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಆದರೆ,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.