ADVERTISEMENT

Karnataka Bandh | ಮೈಸೂರು: ಬಸ್ ತಡೆಯಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 3:04 IST
Last Updated 22 ಮಾರ್ಚ್ 2025, 3:04 IST
   

ಮೈಸೂರು: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ತಂಡ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ತಡೆಯಲು ಯತ್ನಿಸಿದ ಕನ್ನಡಪರ ಹೋರಾಟಗಾರರ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದರು.

ಶನಿವಾರ ಬೆಳಿಗ್ಗೆ ಬಸ್ ನಿಲ್ದಾಣದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಮರಾಠಿ ಸಂಘಟನೆ ಮುಖಂಡರ ವಿರುದ್ಧ ಘೋಷಣೆ‌ ಕೂಗಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರು ಬಸ್ ನಿಲ್ದಾಣದಿಂದ ತೆರಳುತ್ತಿದ್ದ ಬಸ್‌ನ್ನು ತಡೆಯಲು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿ, ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ADVERTISEMENT

ಬಸ್ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.