ADVERTISEMENT

ಮುಖ್ಯಮಂತ್ರಿ ಬದಲಾವಣೆ ಇಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2025, 15:31 IST
Last Updated 19 ಫೆಬ್ರುವರಿ 2025, 15:31 IST
<div class="paragraphs"><p>ಡಾ.ಯತೀಂದ್ರ ಸಿದ್ದರಾಮಯ್ಯ</p></div>

ಡಾ.ಯತೀಂದ್ರ ಸಿದ್ದರಾಮಯ್ಯ

   

ಮೈಸೂರು: ‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ’ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಯಾರೂ ಮಾತನಾಡುತ್ತಿಲ್ಲ. ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಇದಕ್ಕೆಲ್ಲಾ ವಿರಾಮ ಹಾಕಬೇಕು’ ಎಂದರು.

ADVERTISEMENT

‘ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಹೈಕಮಾಂಡ್‌ ಈಗಾಗಲೇ ಹೇಳಿದೆ. ವಿರೋಧ‍ಪಕ್ಷದವರು ಮುಖ್ಯಮಂತ್ರಿ ವಿರುದ್ಧ ದೊಡ್ಡ ಆರೋಪ ಮಾಡಿ ಪಾದಯಾತ್ರೆ ನಡೆಸಿದ ಸಂದರ್ಭದಲ್ಲೇ ಹೈಕಮಾಂಡ್‌ ಗಟ್ಟಿಯಾಗಿಯೇ ಹೇಳಿದೆ. ಅವರೊಂದಿಗೆ ಹಿಂದಿನಿಂದಲೂ ನಿಂತಿದೆ’ ಎಂದು ತಿಳಿಸಿದರು.

‘ಪಕ್ಷದಲ್ಲಿ ಯಾವುದೇ ಬಣವಿಲ್ಲ. ರಾಜಕೀಯ ಪಕ್ಷ ಎಂದ ಮೇಲೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಆದರೆ, ಬಣ ರಾಜಕಾರಣ ನಮ್ಮಲ್ಲಿಲ್ಲ’ ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ತಿಂಗಳಿಂದ ಹಣ ಬಂದಿಲ್ಲವೋ ಅದೆಲ್ಲವನ್ನೂ ಸೇರಿಸಿ ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಪಾವತಿಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.