ADVERTISEMENT

ಪಿರಿಯಾಪಟ್ಟಣ: ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಹೃದಯಾಘಾತದಿಂದ ಸಾವು

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 5:17 IST
Last Updated 30 ಡಿಸೆಂಬರ್ 2020, 5:17 IST
   

ಪಿರಿಯಾಪಟ್ಟಣ: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮತ‌ ಎಣಿಕೆ ಕೇಂದ್ರದ ಅಧಿಕಾರಿ ಬೋರೇಗೌಡ (52) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಆಗಿರುವ ಅವರು ಬುಧವಾರ ಬೆಳಿಗ್ಗೆ ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದರು.

ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.