ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಗುರುವಾರ ಏರ್ಪಡಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು‘ ಕಾರ್ಯಾಗಾರಕ್ಕೆ ಬರಬೇಕಿದ್ದ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಲ್ಲಿಯೇ ತಾಂತ್ರಿಕ ದೋಷ ಉಂಟಾಗಿದೆ.
ಹೀಗಾಗಿ ಅವರು ರಸ್ತೆ ಮಾರ್ಗದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಅವರ ಬರುವಿಕೆಗಾಗಿ ಕಾಯದೇ ಕಾರ್ಯಾಗಾರ ಆರಂಭವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.