ದಿನೇಶ್ ಗುಂಡೂರಾವ್
– ಪ್ರಜಾವಾಣಿ ಚಿತ್ರ
ಮೈಸೂರು: ‘ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಅಥವಾ ಗೊಂದಲವಾಗಲಿ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದರು.
‘ಮುಖ್ಯಮಂತ್ರಿ ಆಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಯಾರು ಆ ಸ್ಥಾನದಲ್ಲಿ ಕೂರಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಸಮಯ ಬಂದಾಗ ಎಲ್ಲವನ್ನೂ ವರಿಷ್ಠರು ತೀರ್ಮಾನಿಸುತ್ತಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನೋಡೋಣ’ ಎಂದು ಹೇಳಿದರು.
‘ವಿರೋಧ ಪಕ್ಷ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ಆ ಪಕ್ಷದ ಬಿ.ವೈ. ವಿಜಯೇಂದ್ರ, ಆರ್. ಆಶೋಕ್, ಪ್ರಲ್ಹಾದ ಜೋಶಿ ಮೊದಲಾದವರು ಕೇವಲ ಭಾಷಣ ಬಿಗಿಯುವುದರಲ್ಲೇ ನಿರತರಾಗಿದ್ದಾರೆ. ರಾಜ್ಯದ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ತಲುಪಿಸುತ್ತಿಲ್ಲ. ರಾಜ್ಯಕ್ಕೆ ಅನ್ಯಾಯ ಆಗುತ್ತಿರುವ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ. ಅವರಿಗೆ ಜವಾಬ್ದಾರಿ ಇಲ್ಲವೇ?’ ಎಂದು ಕೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.