ಸಾಲಿಗ್ರಾಮ: ನಿರಂತರ ಮಳೆಯಿಂದಾಗಿ ತಾಲ್ಲೂಕಿನ ಗಡಿ ಭಾಗದ ತಂದ್ರೆ ಅಂಕನಹಳ್ಳಿ ಗ್ರಾಮ ಸುಜಾತಾ ಎಂಬುವರ ಮನೆ ಗೋಡೆ ಶನಿವಾರ ರಾತ್ರಿ ಕುಸಿದು ಬಿದ್ದಿದೆ.
ಶೀತ ಹೆಚ್ಚಾದ ಕಾರಣ ಗ್ರಾಮದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದ್ದು ಕೆಲವು ಕುಟುಂಬಗಳು ಜೀವ ಕೈಯಲ್ಲಿ ಹಿಡಿದು ದಿನ ಕಳೆಯುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮದ ಯುವ ಮುಖಂಡ ಬಸವರಾಜ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ವಿಷಯ ತಿಳಿಯುತ್ತಿದ್ದಂತೆ ದೇವಿತಂದ್ರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಾಮನರಾವ್ ಅಭಯಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.