ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಗಳ ಸಹಯೋಗದಲ್ಲಿ ಆ.8ರಂದು ಬೆಳಿಗ್ಗೆ 11.30ಕ್ಕೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ‘ರಾಜ್ಯಪಾಲರ ನಡೆ ಮತ್ತು ದ್ವೇಷ ರಾಜಕಾರಣ– ಒಂದು ಗಂಭೀರ ಚಿಂತನೆ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ತಿಳಿಸಿದರು.
‘ಚಿಂತಕ ಜಾಣಗೆರೆ ವೆಂಕಟರಾಮಯ್ಯ ಉದ್ಘಾಟಿಸುವರು. ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಕೆ. ಷರೀಫಾ, ಬಂಜಗೆರೆ ಜಯುಪ್ರಕಾಶ್ ವಿಚಾರ ಮಂಡಿಸುವರು. ಕವಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಭಾಗವಹಿಸುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ– ಜೆಡಿಎಸ್ ರಾಜಕೀಯ ಪಿತೂರಿ ನಡೆಸುತ್ತಿವೆ. ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಮುಖ್ಯಮಂತ್ರಿಗೆ ನೋಟಿಸ್ ನೀಡಿದ್ದಾರೆ. ಸಿಎಂ ಪತ್ನಿಗೆ ಮುಡಾ ಕಾನೂನು ಬಾಹಿರವಾಗಿ ನಿವೇಶನ ನೀಡಿಲ್ಲ. ಆದರೂ ಹಗರಣ ಎಂಬಂತೆ ಬಿಂಬಿಸಲಾಗುತ್ತಿದೆ. ಇದರ ಹಿಂದೆ ದ್ವೇಷ ರಾಜಕಾರಣ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.
ಮುಖಂಡರಾದ ಲೋಕೇಶ್ ಮಾದಾಪುರ, ಕೇಶವ್, ರವಿನಂದನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.