ADVERTISEMENT

ಮೈಸೂರು: ನಾಲ್ವರಿಗೆ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 12:29 IST
Last Updated 8 ಸೆಪ್ಟೆಂಬರ್ 2022, 12:29 IST

ಮೈಸೂರು: ನಾಡಿನಲ್ಲಿ ವಿಜ್ಞಾನ ಜನಪ್ರಿಯಗೊಳಿಸಲು ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಿಂದ ನೀಡುವ 2022ನೇ ಸಾಲಿನ ರಾಜ್ಯಮಟ್ಟದ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’ ಪ್ರಕಟಿಸಲಾಗಿದೆ.

ಮೈಸೂರು ಸಿಎಫ್‌ಟಿಆರ್‌ಐ ನಿವೃತ್ತ ವಿಜ್ಞಾನಿ ಮತ್ತು ‘ಬಾಲವಿಜ್ಞಾನ’ ಮಾಸಪತ್ರಿಕೆಯ ಸಂಪಾದಕಿ ಶ್ರೀಮತಿ ಹರಿಪ್ರಸಾದ್ (ಮೈಸೂರು), ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್. ನಾಗರಾಜು (ಬೆಂಗಳೂರು), ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಆರ್.ಬಳೂರಗಿ (ವಿಜಯಪುರ) ಮತ್ತು ಶಿಕ್ಷಣ ತಜ್ಞ ಪ್ರೊ.ಬಿ.ಕೆ.ಚಳಗೇರಿ (ಕಲಬುರಗಿ) ಅವರನ್ನು ಆಯ್ಕೆ ಮಾಡಲಾಗಿದೆ.

ಪರಿಷತ್ತಿನಿಂದ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ನಡೆಯುತ್ತಿರುವ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ (ಸೆ.10) ಪ್ರದಾನ ಮಾಡಲಾಗುವುದು. ಇಸ್ರೋ ನಿವೃತ್ತ ವಿಜ್ಞಾನಿ ಎ.ಎಸ್.ಕಿರಣ್ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ. ಪರಿಷತ್ತಿನ ಅಧ್ಯಕ್ಷ ಗಿರೀಶ ಕಡ್ಲೆವಾಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಎ.ಎನ್.ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.