ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ
ಮೈಸೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸಿದ್ದ 2023-24ನೇ ಸಾಲಿನ ವಿಶೇಷ ಸಂಗೀತ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಶೇ 90ರಷ್ಟು ಪರೀಕ್ಷಾರ್ಥಿಗಳು ಉತ್ತೀರ್ಣರಾಗಿದ್ದಾರೆ.
'ವಿಶೇಷ ಸಂಗೀತ, ನೃತ್ಯ, ತಾಳವಾದ್ಯದಲ್ಲಿ ಒಟ್ಟು 9 ವಿಧದ ಪರೀಕ್ಣೆಗಳು ನಡೆದಿದ್ದವು. 17,788 ವಿದ್ಯಾರ್ಥಿಗಳು ಹಾಗೂ 3500 ಶಿಕ್ಷಕರು ನೋಂದಾಯಿಸಿಕೊಂಡಿದ್ದರು. ರಾಜ್ಯದ 18 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಆಯೋಜಿಸಲಾಗಿತ್ತ' ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ನಾಗೇಶ್ ಬೆಟ್ಟಕೋಟೆ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ಸದ್ಯದಲ್ಲೇ ನಡೆಯಲಿರುವ ವಿಶೇಷ ಘಟಿಕೋತ್ಸವದಲ್ಲಿ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಫಲಿತಾಂಶ ವೀಕ್ಷಿಸಲು ವಿಶ್ವವಿದ್ಯಾಲಯದ ವೆಬ್ ಸೈಟ್ ನೋಡಬಹುದು' ಎಂದರು.
ವಿಶ್ವವಿದ್ಯಾಲಯದ ಕುಲಸಚಿವ ಎಂ.ಜಿ. ಮಂಜುನಾಥ್ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.