ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಳವಳ್ಳಿ (ಮಂಡ್ಯ ಜಿಲ್ಲೆ): ‘ಕೆಆರ್‌ಎಸ್ ಜಲಾಶಯದ ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ನಿಲ್ಲಿಸಲಾಗದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ತಾಲ್ಲೂಕಿನ ಶಿವನಸಮುದ್ರ ಬಳಿ ಭಾನುವಾರ ‘ಗಗನಚುಕ್ಕಿ ಜಲಪಾತೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸಿ ರೈತ ಸಂಘದ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ಪ್ರಕೃತಿ ಮಾತೆಗೆ ಪೂಜೆ, ಆರತಿ ಮಾಡುವುದನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.
‘ಎರಡು ವರ್ಷಗಳಲ್ಲೇ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ₹ 2ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಇದುವರೆಗೆ ₹ 1,970 ಕೋಟಿ ಮೊತ್ತದ ಕಾಮಗಾರಿ ಮಂಜೂರಾಗಿವೆ. ಇದು ಸುಳ್ಳಾದರೆ ವಿರೋಧ ಪಕ್ಷದವರು ಬಂದು ಪರಿಶೀಲಿಸಲಿ’ ಎಂದು ಸವಾಲೆಸೆದರು.
‘ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ನನ್ನ ಕಣ್ಣುಗಳಿದ್ದಂತೆ. ರೈತರ ಬದುಕು ಸುಧಾರಣೆಗೆ ಹಾಗೂ ಅಭಿವೃದ್ಧಿಗೆ ಎಲ್ಲ ರೀತಿಯ ಕಾಯಕ್ರಮ ರೂಪಿಸಲು ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.