ADVERTISEMENT

ಕಾವೇರಿ ಗ್ರಾಮೀಣ ಬ್ಯಾಂಕ್‌ ನೌಕರರ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 14:29 IST
Last Updated 11 ಡಿಸೆಂಬರ್ 2018, 14:29 IST
ಮೈಸೂರಿನಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್‌ ನೌಕರರ ವತಿಯಿಂದ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಿತು
ಮೈಸೂರಿನಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್‌ ನೌಕರರ ವತಿಯಿಂದ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಿತು   

ಮೈಸೂರು: ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ, ಕಾವೇರಿ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಯಿತು.

ವಿಜಯನಗರದ ಪ್ರಧಾನ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಎಂ.ಮುನಿಯಪ್ಪ ಮಾತನಾಡಿ, ಗ್ರಾಮೀಣ ಬ್ಯಾಂಕುಗಳಲ್ಲಿ ದಿನಗೂಲಿ, ಹೊರಗುತ್ತಿಗೆ ಪದ್ಧತಿ ರದ್ದಾಗಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ವಾಣಿಜ್ಯ ಬ್ಯಾಂಕ್‌ಗಳ ಉದ್ಯೋಗಿಗಳಿಗೆ ನೀಡುವ ನಿವೃತ್ತಿ ವೇತನವನ್ನು ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳಿಗೂ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಬೇಕು ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕೈಬಿಡಬೇಕು. ಗ್ರಾಮೀಣ ಬ್ಯಾಂಕ್ ನೌಕರರಿಗೂ ಕಂಪ್ಯೂಟರ್ ಬಡ್ತಿ ನೀಡಬೇಕು. 10ನೇ ವೇತನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು. ವಾಣಿಜ್ಯ ಬ್ಯಾಂಕುಗಳಲ್ಲಿ ಇರುವಂತೆ ನೇಮಕಾತಿ ಮತ್ತು ಬಡ್ತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಕೃಷ್ಣಮೂರ್ತಿ, ನೌಕರರ ಸಂಘದ ಅಧ್ಯಕ್ಷ ಟಿ.ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ವಿ.ಆರ್.ಶ್ರೀನಿವಾಸ್, ಸುಬ್ರಹ್ಮಣ್ಯ, ನಾಗಭೂಷಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.