ADVERTISEMENT

ಲಂಚ ಪಡೆದ ಆರೋಪ: ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಮೇ 2022, 7:34 IST
Last Updated 28 ಮೇ 2022, 7:34 IST
ರಾಜ್ಯ ರೈತ ಸಂಘದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.   

ಮೈಸೂರು: ‘ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು. ಅವರು ಕೂಡಲೇ ಹಸಿರು ಟವೆಲ್ ತೆಗೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಮುಂದಿನ ಮಹಾತ್ಮ ಗಾಂಧಿ ಪುತ್ಥಳಿ ಮುಂದೆ ಸೇರಿದ ಕಾರ್ಯಕರ್ತರು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಇದುವರೆಗೂ ಕೇವಲ ಅಧಿಕಾರಿಗಳು, ರಾಜಕಾರಣಿಗಳಷ್ಟೇ ಭ್ರಷ್ಟರಾಗಿದ್ದರು. ಹೋರಾಟಗಾರರೂ ಭ್ರಷ್ಟರಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ‌ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಪಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಈ ಮೂಲಕ ಹೋರಾಟದ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT