ADVERTISEMENT

ಶನಿವಾರ, ಭಾನುವಾರವೂ ಕಿಸಾನ್ ಸಮ್ಮಾನ್‌ ನಿಧಿ ಅರ್ಜಿ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:46 IST
Last Updated 21 ಜೂನ್ 2019, 19:46 IST

ಮೈಸೂರು: ರೈತರ ಆದಾಯ ವೃದ್ಧಿಗಾಗಿ ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ, ಭೂ ಒಡೆತನ ಹೊಂದಿರುವ ಪ್ರತಿ ರೈತರ ಕುಟುಂಬಕ್ಕೆ ಒಂದು ವರ್ಷಕ್ಕೆ ₹ 6000 ನಗದನ್ನು ಮೂರುಸಮಾನ ಕಂತುಗಳಲ್ಲಿ ವಿತರಿಸಲಿದ್ದು, ರಜಾ ದಿನಗಳಾದ ಜೂನ್ 22, 23ರಂದು ಸಹ ರೈತರು ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರೈತರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ನಾಡ ಕಚೇರಿ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಸ್ವಯಂ ಘೋಷಣೆಯ ನಮೂನೆಯನ್ನು ಪಡೆದು, ಸಂಪೂರ್ಣ ವಿವರಗಳನ್ನು ನಮೂದಿಸಿ, ಸದರಿ ಕೇಂದ್ರಗಳಲ್ಲಿ ಸಲ್ಲಿಸಬಹುದು. ಜೂನ್ 28ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT