
ಪ್ರಜಾವಾಣಿ ವಾರ್ತೆಮೈಸೂರು: ‘ಮತದಾರರಿಂದ ಬಹುಮತ ಪಡೆದು ರಚನೆಯಾದ ರಾಜ್ಯ ಸರ್ಕಾರದ ಸಾರ್ವಭೌಮತ್ವಕ್ಕೆ ರಾಜ್ಯಪಾಲರು ಅವಮಾನ ಮಾಡಿದ್ದಾರೆ’ ಎಂದು ಕೆಪಿಸಿಸಿ ಸದಸ್ಯ ಪಿ.ರಾಜು ಅಶೋಕಪುರಂ ದೂರಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯಪಾಲರು ಸರ್ಕಾರದ ಭಾಷಣ ಓದದೆ ನಡೆದುಕೊಂಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ರಾಜ್ಯದ ಜನತೆಯ ಮತದ ಮೌಲ್ಯ ಕುಸಿಯುವಂತಹ ಕೆಲಸವನ್ನು ಅವರು ಮಾಡಿದ್ದಾರೆ. ಸದನಕ್ಕೆ ಮಸಿ ಬಳಿಯುವ ಪ್ರಯತ್ನ ಸಲ್ಲದು’ ಎಂದು ಹೇಳಿದ್ದಾರೆ.
‘ಬಿಜೆಪಿಯೇತರ ಸರ್ಕಾರಗಳಿಗೆ ತೊಂದರೆ ಕೊಡುವ ಕೆಲಸವನ್ನು ಅಲ್ಲಿನ ರಾಜ್ಯಪಾಲರು ಮಾಡುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ಅವರು ಪಕ್ಷಾತೀತ ನಡವಳಿಕೆ ತೋರಬೇಕು. ಬದಲಿಗೆ ಪಕ್ಷಪಾತ ನಡವಳಿಕೆಯ ಪರಮಾವಧಿಯನ್ನು ಪ್ರದರ್ಶಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.