ADVERTISEMENT

ಕೆಆರ್‌ಎಸ್‌: ಹೊರಹರಿವು ಮತ್ತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 29 ಜುಲೈ 2019, 14:49 IST
Last Updated 29 ಜುಲೈ 2019, 14:49 IST
ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ, ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹೊಗೆನಕಲ್‌ ಜಲಪಾತದ ವೈಭವ ಮತ್ತೆ ಮರುಕಳಿಸಿದೆ
ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ, ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹೊಗೆನಕಲ್‌ ಜಲಪಾತದ ವೈಭವ ಮತ್ತೆ ಮರುಕಳಿಸಿದೆ   

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೊರಹರಿಸುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ.

ಕಳೆದೊಂದು ವಾರದಿಂದ ಸಮಪ್ರಮಾಣದಲ್ಲಿ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಆದರೆ ಸೋಮವಾರ ನದಿಗೆ ಹರಿಸುತ್ತಿರುವ ನೀರು ದ್ವಿಗುಣಗೊಂಡಿದ್ದು, ತಮಿಳುನಾಡಿಗೆ ಹರಿದು ಹೋಗುತ್ತಿದೆ. ಜುಲೈ 19ರಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು ಈಗಾಗಲೇ 2 ಟಿಎಂಸಿ ಅಡಿ ನೀರು ಹರಿದು ಹೋಗಿದೆ.

‘ಹೇಮಾವತಿ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಹೇಮಾವತಿ ಪಾಲನ್ನೂ ನದಿಗೆ ಹರಿಸಬೇಕಾಗಿದೆ. ಹೀಗಾಗಿ ಹೊರಹರಿವು ಹೆಚ್ಚಿಸಲಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.