ADVERTISEMENT

ಕೆಎಸ್‌ಒಯು: ಮರುಪರೀಕ್ಷೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2023, 16:00 IST
Last Updated 23 ಸೆಪ್ಟೆಂಬರ್ 2023, 16:00 IST
   

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.

ಪೊಲೀಸರು ಅಂತಿಮ ವರ್ಷದ ಬಿಕಾಂ ಕಂಪ್ಯೂಟರ್ ಇನ್ ಬಿಸಿನೆಸ್‌ನ ಪ್ರಶ್ನೆ ಪತ್ರಿಕೆ ಎಲ್ಲಿಂದ ಬಂದಿದೆ ಎಂಬ ಮಾಹಿತಿಯನ್ನು ಆಧರಿಸಿ ಚಾಮರಾಜನಗರ ಜಿಲ್ಲೆಯ ಮುಕ್ತ ವಿ.ವಿ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆಯು ಮಂಗಳೂರಿನ ಕೇಂದ್ರದಿಂದಲೂ ಬಂದಿರುವ ಬಗ್ಗೆ ಮಾಹಿತಿ ಇದೆ.‌ ರಾಜ್ಯದೆಲ್ಲೆಡೆ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆಯೇ ಎಂಬ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ವಾಟ್ಸಾಪ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಿದ್ದ ಇಬ್ಬರು ವಿದ್ಯಾರ್ಥಿಗಳಾದ ನವೀನ್ ಮತ್ತು ಮುರಳಿ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮುಕ್ತ ವಿವಿಗೆ ಭೇಟಿ ನೀಡಿ ಪ್ರಶ್ನೆ ಪತ್ರಿಕೆಗಳನ್ನು ಪರಿಶೀಲನೆ ನಡೆದ್ದಾರೆ.

ADVERTISEMENT

ಮರುಪರೀಕ್ಷೆಗೆ ನಿರ್ಧಾರ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂತಿಮ ವರ್ಷದ ಬಿಕಾಂ ಕಂಪ್ಯೂಟರ್ ಇನ್ ಬಿಸಿನೆಸ್‌ ವಿಷಯದ ಮರುಪರೀಕ್ಷೆ ನಡೆಸಲು ಮುಕ್ತ ವಿಶ್ವವಿದ್ಯಾಲಯ ನಿರ್ಧರಿಸಿದೆ. ‘ಪೊಲೀಸ್‌ ತನಿಖೆಯ ಬಳಿಕ ಕುಲಪತಿ ಜೊತೆ ಚರ್ಚಿಸಿ ದಿನಾಂಕ ನಿಗದಿಪಡಿಸುತ್ತೇವೆ’ ಎಂದು ಕುಲಸಚಿವ ಕೆ.ಎಲ್‌.ಎನ್‌ ಮೂರ್ತಿ ‘ಪ್ರಜಾವಾಣಿ’ ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.