ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) 21ನೇ ವಾರ್ಷಿಕ ಘಟಿಕೋತ್ಸವ ಜ.31ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದ್ದು, ಎಂಟು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರಿನ ಹರ್ಷ ಸಮೂಹ ಸಂಸ್ಥೆ ಅಧ್ಯಕ್ಷ ಎಸ್.ಶಿವಕುಮಾರ್, ತುಮಕೂರಿನ ಕಿಡ್ಸ್ ಇಂಟರ್‌ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ಮತ್ತು ಕಾರ್ಯದರ್ಶಿ ಸತೀಶ್‌ಕುಮಾರ್ ಡಿ.ಕೆಗ್ಗೆರೆ, ಮೈಸೂರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯದ ಲಕ್ಷ್ಮೀ, ಮೈಸೂರಿನ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಭಾಷ್ಯಂ ಸ್ವಾಮೀಜಿ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಲಿಂಗರಾಜು, ಹಾಸನದ ಜೋತಿಷಶಾಸ್ತ್ರಜ್ಞ ಬಿ.ಎಸ್.ನಾಗಭೂಷಣ ಅಟ್ರಿ, ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ಬೀದರ್‌ನ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವಶಂಕರ ಟೊಕರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
‘ಇವರನ್ನು ಅವರವರ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.