ADVERTISEMENT

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಹರಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 7:14 IST
Last Updated 24 ಜುಲೈ 2025, 7:14 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಮೈಸೂರು: ಇಲ್ಲಿನ ಶ್ರೀರಾಂಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಶ್ರೀರಾಂಪುರದ ನಿವಾಸಿ ಪುರುಷೋತ್ತಮಯ್ಯ (71) ಮೃತಪಟ್ಟವರು. ಇಂದು (ಗುರುವಾರ) ಬೆಳಿಗ್ಗೆ 7 ಗಂಟೆಗೆ ಹಾಲಿನ ಬೂತ್ ಗೆ ಬಂದು ಹಾಲು ಖರೀದಿಸಿ ತಮ್ಮ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್‌ಗೆ ಬಸ್‌ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಪುರುಷೋತ್ತಮಯ್ಯ ಕೆಳಗುರುಳಿದ್ದು, ಬಸ್‌ ಟಯರ್ ಅವರ ತಲೆಯ ಮೇಲೆ ಹರಿದಿದೆ. ಕೆ.ಆರ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.